ದೇಶಾದ್ಯಂತ ತಾಪಮಾನ ಹೆಚ್ಚಳ: ಕೆಂಡವಾದ ಕರ್ನಾಟಕ

masthmagaa.com:

ದೇಶದ ಹಲವು ಭಾಗಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ಕೆಲವು ನಗರಗಳಲ್ಲಿ ದಾಖಲೆಯ ಉಷ್ಣಾಂಶ ವರದಿಯಾಗಿದೆ. ನೆನ್ನೆ ಸಂಜೆ ವೇಳೆಗೆ ಉತ್ತರ ಹಾಗೂ ದಕ್ಷಿಣ ರಾಜ್ಯಗಳ ವಿವಿಧ ನಗರಗಳಲ್ಲಿ ತಾಪಮಾನ ಹೆಚ್ಚಾಗಿದೆ. ಒಡಿಶಾದ ಬರಿಪಾದ, ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸೇರಿದಂತೆ ಕೆಲವು ರಾಜ್ಯಗಳಲ್ಲಿ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಇನ್ನೂ ಜಾಸ್ತಿಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ಇತ್ತ ಕಳೆದ ಕೆಲವು ವಾರಗಳಿಂದ ಕರ್ನಾಟಕದ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ ಅಂಕಿ ಅಂಶಗಳ ಪ್ರಕಾರ, ಕಲಬುರಗಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

-masthmagaa.com

Contact Us for Advertisement

Leave a Reply