masthmagaa.com:

ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,005 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 442 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 98.26 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,42,628 ಆಗಿದೆ.

ಕಳೆದ 24 ಗಂಟೆಗಳಲ್ಲಿ 33,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 93.24 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3.59 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ ಶೇ.94.89ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇ.1.45ರಷ್ಟು ಇದೆ. ಡಿಸೆಂಬರ್ 11ರಂದು 10.65 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 15.26 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply