ದೇಶದಲ್ಲಿ ಕೊರೋನಾ ಕಂಟಕ..! ಒಂದೇ ದಿನ ಸತ್ತಿದ್ದು ಎಷ್ಟು ಜನ ಗೊತ್ತಾ..?

masthmagaa.com:

ದೆಹಲಿ: ಭಾರತದಲ್ಲಿ ಕೊರೋನಾ ಸೋಂಕುಪೀಡಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 1,993 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 73 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 35,043ಕ್ಕೆ ಏರಿಕೆಯಾಗಿದ್ದು, 1,147 ಮಂದಿ ಬಲಿಯಾಗಿದ್ದಾರೆ. ಇನ್ನು 8,889 ಮಂದಿ ಗುಣಮುಖರಾಗಿದ್ದು, 25,007 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ 10,498 ಮಂದಿ ಸೋಂಕಿತರು ಪತ್ತೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ಇಲ್ಲಿ ಈವರೆಗೆ 459 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2ನೇ ಸ್ಥಾನದಲ್ಲಿರೋ ಗುಜರಾತ್​ನಲ್ಲಿ 4,395 ಮಂದಿಗೆ ಸೋಂಕು ತಗುಲಿದ್ದು, 214 ಮಂದಿ ಮೃತಪಟ್ಟಿದ್ದಾರೆ. ಇನ್ನು ದೆಹಲಿ 3,515 ಮಂದಿ ಸೋಂಕಿತರೊಂದಿಗೆ 3ನೇ ಸ್ಥಾನದಲ್ಲಿದ್ದು, 59 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕರ್ನಾಟಕದಲ್ಲಿ ಈವರೆಗೆ 565 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply