masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 11,458 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಒಂದೇ ದಿನ 11 ಸಾವಿರ ಗಡಿ ದಾಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 3 ಲಕ್ಷ ದಾಟಿದ್ದು 3,08,993 ಆಗಿದೆ. ನಿನ್ನೆಯಷ್ಟೇ ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಬ್ರಿಟನ್ ಮೀರಿಸಿದ್ದ ಭಾರತ 4ನೇ ಸ್ಥಾನಕ್ಕೆ ಬಂದಿತ್ತು. ಮೊದಲ ಮೂರು ಸ್ಥಾನದಲ್ಲಿ ಅಮೆರಿಕ, ಬ್ರೆಜಿಲ್, ರಷ್ಯಾ ದೇಶಗಳಿವೆ. 

ಕಳೆದ 24 ಗಂಟೆಗಳಲ್ಲಿ 386 ಜನ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 8,884 ಆಗಿದೆ. ಇದುವರೆಗೆ 1,54,330 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,45,779 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ತಮಿಳುನಾಡಿನಲ್ಲಿ 40 ಸಾವಿರ, ದೆಹಲಿಯಲ್ಲಿ 36 ಸಾವಿರ ಮತ್ತು ಗುಜರಾತ್​ನಲ್ಲಿ 22 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿ ಮುಂದುವರಿದಿದೆ.

-masthmagaa.com

Contact Us for Advertisement

Leave a Reply