ದೇಶದಲ್ಲಿ ಕೊರೋನಾ ದಾಖಲೆ.. 5 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 18,552 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದ್ದು 5,08,953ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 384 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 15,685 ಆಗಿದೆ. ಇದುವರೆಗೆ 2,95,881 ಜನ ಗುಣಮುಖರಾಗಿದ್ದಾರೆ. 1,97,387 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಟ್ಟು ಸೋಂಕಿತರ ಸಂಖ್ಯೆ 1.52 ಲಕ್ಷ ದಾಟಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 77 ಸಾವಿರ, ತಮಿಳುನಾಡಿನಲ್ಲಿ 74 ಸಾವಿರ ಮತ್ತು ಗುಜರಾತ್​ನಲ್ಲಿ 30 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply