masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 10,956 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 10 ಸಾವಿರ ಗಡಿ ದಾಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2,97,535 ಆಗಿದೆ. ಇದರೊಂದಿಗೆ ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಬ್ರಿಟನ್ ಮೀರಿಸಿರೋ ಭಾರತ 4ನೇ ಸ್ಥಾನಕ್ಕೆ ಬಂದಿದೆ. ಬ್ರಿಟನ್​ನಲ್ಲಿ 2.92 ಲಕ್ಷ ಜನರಿಗೆ ಸೋಂಕು ತಾಗಿದೆ. ಮೊದಲ ಮೂರು ಸ್ಥಾನದಲ್ಲಿ ಅಮೆರಿಕ, ಬ್ರೆಜಿಲ್, ರಷ್ಯಾ ದೇಶಗಳಿವೆ. 

ಕಳೆದ 24 ಗಂಟೆಗಳಲ್ಲಿ 396 ಜನ ಮೃತಪಟ್ಟಿದ್ದಾರೆ. ಕೊರೋನಾಗೆ ಸಂಬಂಧಿಸಿದಂತೆ ಇದು ಈವರೆಗಿನ ಅತಿ ಹೆಚ್ಚು ಸಾವಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 8,498 ಆಗಿದೆ. ಇದುವರೆಗೆ 1,47,195 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,41,842 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 99 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 38 ಸಾವಿರ, ದೆಹಲಿಯಲ್ಲಿ 34 ಸಾವಿರ ಮತ್ತು ಗುಜರಾತ್​ನಲ್ಲಿ 22 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿ ಮುಂದುವರಿದಿದೆ.

-masthmagaa.com

Contact Us for Advertisement

Leave a Reply