ಕೀವೀಸ್​​ ನಾಡಲ್ಲಿ ಸರಣಿ ಕ್ಲೀನ್​ಸ್ವೀಪ್ ಮಾಡಿದ ಕೊಹ್ಲಿ ಪಡೆ

ನ್ಯೂಜಿಲೆಂಡ್ ವಿರುದ್ಧದ 5ನೇ ಟಿ-20 ಕದನದಲ್ಲಿ ಭಾರತ ಗೆದ್ದು ಬೀಗಿದೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 5-0 ಅಂತರದಲ್ಲಿ ಗೆದ್ದು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್​ನ ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 3 ವಿಕೆಟ್ ನಷ್ಟಕ್ಕೆ 164 ರನ್​​ಗಳ ಟಾರ್ಗೆಟ್ ನೀಡಿತ್ತು. ಭಾರತದ ಪರ ರೋಹಿತ್ ಶರ್ಮಾ 60 ರನ್ ಸಿಡಿಸಿದ್ರೆ, ಕೆಎಲ್​ ರಾಹುಲ್ 44 ರನ್ ಸಿಡಿಸಿದ್ರು. ಇನ್ನು ಭಾರತದ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ 20 ಓವರ್​​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಲಷ್ಟೇ ಶಕ್ತವಾಯ್ತು. ಇದರಿಂದ ಭಾರತ 7 ರನ್​​ಗಳ ಗೆಲುವು ದಾಖಲಿಸಿತು. 12 ರನ್ ನೀಡಿ 3 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಿ ಗೌರವಿಸಲಾಯ್ತು.

Contact Us for Advertisement

Leave a Reply