ದೇಶದಲ್ಲಿ ಸತತ 5 ದಿನಗಳಿಂದ ಈ ದಾಖಲೆ ಬರೆಯುತ್ತಿದೆ ಕೊರೋನಾ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,889 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 338 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 99.79 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,44,789 ಆಗಿದೆ. ದೇಶದಲ್ಲಿ ನಿರಂತರ 5 ದಿನಗಳಿಂದ 30 ಸಾವಿರಕ್ಕೂ ಕಡಿಮೆ ಕೊರೋನಾ ಪ್ರಕರಣ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 31,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 95.20 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3.13 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 95.40%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.45% ಇದೆ. ಡಿಸೆಂಬರ್ 17ರಂದು 11.13 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 15.89 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply