ದೇಶದಲ್ಲಿ 7 ತಿಂಗಳ ಬಳಿಕ ಈ ದಾಖಲೆ ಬರೆದ ಡೆಡ್ಲಿ ಕೊರೋನಾ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,584 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 167 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 4 ಲಕ್ಷದ 79 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,51,327ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ ಇಷ್ಟು ಕಡಿಮೆ ಜನರಿಗೆ ಸೋಂಕು ತಗುಲಿರೋದು 7 ತಿಂಗಳ ಬಳಿಕ ಇದೇ ಮೊದಲು. ಈ ಹಿಂದೆ ಜೂನ್ 16ರಂದು 10,974 ಕೊರೋನಾ ಕೇಸ್​ಗಳು ಪತ್ತೆಯಾಗಿದ್ದವು.

ಕಳೆದ 24 ಗಂಟೆಗಳಲ್ಲಿ 18,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 1 ಲಕ್ಷದ 11 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 16 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.48 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 11ರಂದು 8.97 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 18.26 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply