masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 21,257 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 271 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 39 ಲಕ್ಷದ 15 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,50,127 ಆಗಿದೆ.

ಕಳೆದ 24 ಗಂಟೆಗಳಲ್ಲಿ 24,963 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 32 ಲಕ್ಷ 25 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 40 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.96 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 13.85 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 58.00 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 50.17 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 93.17 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply