masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 25,455 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 234 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3, ಕೋಟಿ 37 ಲಕ್ಷದ 91 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,48,573 ಆಗಿದೆ.

ಕಳೆದ 24 ಗಂಟೆಗಳಲ್ಲಿ 25,455 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 30 ಲಕ್ಷ 68 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 73 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.86 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 14.29 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 57.19 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 69.33 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 89.74 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply