masthmagaa.com:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,052 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 127 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 7 ಲಕ್ಷದ 46 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,54,274ಕ್ಕೆ ಏರಿಕೆಯಾಗಿದೆ. ಕಳೆದ 8 ತಿಂಗಳ ಬಳಿಕ ದೃಢಪಟ್ಟ ಅತಿ ಕಡಿಮೆ ಕೊರೋನಾ ಕೇಸ್ ಇದಾಗಿದೆ.
ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 4 ಲಕ್ಷದ 23 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 68 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ಗುಣಮುಖ ಪ್ರಮಾಣ 96.99 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 30ರಂದು 7.50 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.65 ಕೋಟಿ ಟೆಸ್ಟ್ಗಳನ್ನ ನಡೆಸಿದಂತಾಗಿದೆ.
ದೇಶದಲ್ಲಿ ನಿನ್ನೆ 2.44 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 37.44 ಲಕ್ಷ ಜನರಿಗೆ ಲಸಿಕೆ ಹಾಕಿದಂತಾಗಿದೆ.
-masthmagaa.com
Contact Us for Advertisement