ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಲಸಿಕೆ, ಎಷ್ಟು ಜನರಿಗೆ ಕೊರೋನಾ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,256 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 152 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 39 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,53,184ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 17,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 3 ಲಕ್ಷ ದಾಟಿದೆ. ಇನ್ನೂ ಕೂಡ 1 ಲಕ್ಷದ 85 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.82 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 22ರಂದು 8.37 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.09 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 3.47 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಲಸಿಕೆ ಅಭಿಯಾನ ಆರಂಭವಾದ ಬಳಿಕ ಒಂದು ದಿನದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಿರೋದು ಇದೇ ಮೊದಲು. ಇದುವರೆಗೆ ಒಟ್ಟು 13.90 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply