ತಿಂಗಳುಗಳ ಬಳಿಕ ದೇಶದಲ್ಲಿ 6 ಲಕ್ಷಕ್ಕಿಂತ ಕೆಳಗಿಳಿದ ಸಕ್ರಿಯ ಪ್ರಕರಣ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 563 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 80.88 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.21 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 57,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 73.73 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5.94 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಂಗಳುಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷಕ್ಕೂ ಕಡಿಮೆಯಾಗಿರೋದು ಗಮನಾರ್ಹ.

ಭಾರತದಲ್ಲಿ ಗುಣಮುಖ ಪ್ರಮಾಣ 91.15%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.50% ಇದೆ. ಅಕ್ಟೋಬರ್ 29ರಂದು 11.64 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 10.77 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply