masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,272 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 1 ಲಕ್ಷದ 69 ಸಾವಿರ ದಾಟಿದೆ. ಕಳೆದ 24 ಗಂಟೆಗಳಲ್ಲಿ 251 ಮಂದಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,47,343ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ ಇಷ್ಟು ಕಮ್ಮಿ ಕೊರೋನಾ ಸೋಂಕಿತರು ಮೃತಪಟ್ಟಿರೋದು ಕಳೆದ 206 ದಿನಗಳಲ್ಲಿ ಇದೇ ಮೊದಲು. ಈ ಹಿಂದೆ ಜೂನ್​ 3ರಂದು 259 ಸೋಂಕಿತರು ಮೃತಪಟ್ಟಿದ್ದರು.

ಕಳೆದ 24 ಗಂಟೆಗಳಲ್ಲಿ 22,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 97.40 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.81 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ ಶೇ.95.78ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇ.1.45ರಷ್ಟು ಇದೆ. ಡಿಸೆಂಬರ್ 25ರಂದು 8.53 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 16.71 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply