masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 41,506 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 895 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 08 ಲಕ್ಷದ 37 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,08,040 ಆಗಿದೆ.

ಕಳೆದ 24 ಗಂಟೆಗಳಲ್ಲಿ 41,526 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 99 ಲಕ್ಷದ 75 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 54 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.20 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 18.43 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 43.08 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 37.23 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 37.60 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

 

Contact Us for Advertisement

Leave a Reply