ದೇಶದಲ್ಲಿ ಕೊರೋನಾಗೆ ಬಲಿಯಾಗುವವರ ಸಂಖ್ಯೆಯಲ್ಲಿ ದಾಖಲೆ ಕುಸಿತ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,149 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 480 ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ 4 ತಿಂಗಳ ಅವಧಿಯಲ್ಲಿ ದೃಢಪಟ್ಟ ಕಡಿಮೆ ಸಾವು ಇದಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 79.09 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.19 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 59,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 71.37 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6.53 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 90.23% ದಾಟಿದ್ದು, ಸಾವಿನ ಪ್ರಮಾಣ 1.50%ಗೆ ಇಳಿಕೆಯಾಗಿದೆ. ಅಕ್ಟೋಬರ್ 25ರಂದು ಒಟ್ಟು 9.39 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 10.34 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply