masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 559 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85.07 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,26,121 ಆಗಿದೆ.

ಕಳೆದ 24 ಗಂಟೆಗಳಲ್ಲಿ 49,082 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 78.68 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5.12 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 92.49%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.48%ಗೆ ಇಳಿಕೆಯಾಗಿದೆ. ನವೆಂಬರ್‌ 7ರಂದು 11.94 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 11.77 ಕೋಟಿ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply