masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,903 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 490 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85.53 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,26,611 ಆಗಿದೆ.

ಕಳೆದ 24 ಗಂಟೆಗಳಲ್ಲಿ 48,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 79.17 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5.09 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 92.56%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.48%ಗೆ ಇಳಿಕೆಯಾಗಿದೆ. ನವೆಂಬರ್‌ 8ರಂದು 8.35 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 11.85 ಕೋಟಿ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply