ದೇಶದಲ್ಲಿ ಸಕ್ರಿಯ ಪ್ರಕರಣ ಹೆಚ್ಚಿರುವ 5 ರಾಜ್ಯಗಳಿವು

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,638 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 670 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 84.11 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.24 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 54,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 77.65 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5.20 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 92.32%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.49% ಇದೆ. ನವೆಂಬರ್‌ 5ರಂದು 12.20 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ಒಟ್ಟು 11.54 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

ಸಕ್ರಿಯ ಪ್ರಕರಣ ಹೆಚ್ಚಿರುವ 5 ರಾಜ್ಯಗಳು:

1. ಮಹಾರಾಷ್ಟ್ರ: 1.07 ಲಕ್ಷ

2. ಕೇರಳ: 84,000+

3. ದೆಹಲಿ: 38,000+

4. ಪಶ್ಚಿಮ ಬಂಗಾಳ: 35,000+

5. ಕರ್ನಾಟಕ: 33,000+

-masthmagaa.com

Contact Us for Advertisement

Leave a Reply