masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,905 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 550 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86.83 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,28,121 ಆಗಿದೆ. ನಿನ್ನೆಗೆ ಹೋಲಿಸಿದ್ರೆ ಕೊರೋನಾ ಪಾಸಿಟಿವ್‌ ಪ್ರಕರಣಗಳಲ್ಲಿ ಶೇ.8ರಷ್ಟು ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 52,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 80.66 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.89 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 92.89%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.48% ಇದೆ. ನವೆಂಬರ್‌ 11ರಂದು 11.93 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 12.19ಕೋಟಿ ಕೊರೋನಾ ಪರೀಕ್ಷೆಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply