GOOD NEWS: ಭಾರತದಲ್ಲಿ ಇದೇ ಮೊದಲು 90% ದಾಟಿದ ಗುಣಮುಖ ಪ್ರಮಾಣ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,129 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 578 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 78.64 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.18 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 62,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 70.78 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6.68 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳು ಸತತ ಮೂರನೇ ದಿನ 7 ಲಕ್ಷಕ್ಕೂ ಕಡಿಮೆ ಇದ್ದಂತಾಗಿದೆ.

ಭಾರತದಲ್ಲಿ ಗುಣಮುಖ ಪ್ರಮಾಣ ಇದೇ ಮೊದಲ ಬಾರಿಗೆ 90% ದಾಟಿದ್ದು, ಸಾವಿನ ಪ್ರಮಾಣ 1.51% ಮತ್ತು ಸಕ್ರಿಯ ಪ್ರಕರಣಗಳ ಪ್ರಮಾಣ 8.49% ಇದೆ. ಅಕ್ಟೋಬರ್ 24ರಂದು ಒಟ್ಟು 11.40 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 10.25 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply