ದೇಶದಲ್ಲಿ ಮತ್ತೆ ಏರುಮುಖ ಕಂಡ ಕೊರೋನಾ ವೈರಸ್..!

masthmagaa.com:

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಇಳಿಮುಖ ಕಾಣುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇದೀಗ ಮತ್ತೆ 50 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 50,209 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 704 ಸೋಂಕಿತರು ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ 8.5% ಏರಿಕೆ ಕಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 83.64 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.24 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 55,331 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 77.11 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5.27 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 92.20%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.49% ಇದೆ. ಅಕ್ಟೋಬರ್ 4ರಂದು 12.09 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 11.42 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

ಸಕ್ರಿಯ ಪ್ರಕರಣ ಹೆಚ್ಚಿರುವ 5 ರಾಜ್ಯಗಳು:

1. ಮಹಾರಾಷ್ಟ್ರ: 1.13 ಲಕ್ಷ

2. ಕೇರಳ: 85,000+

3. ದೆಹಲಿ: 37,000+

4. ಪಶ್ಚಿಮ ಬಂಗಾಳ: 36,000+

5. ಕರ್ನಾಟಕ: 35,000+

-masthmagaa.com

Contact Us for Advertisement

Leave a Reply