masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 53,370 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 650 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 78.14 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.17 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 67,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 70.16 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6.80 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳು ಸತತ ಎರಡನೇ ದಿನ 7 ಲಕ್ಷಕ್ಕೂ ಕಡಿಮೆ ಇದ್ದಂತಾಗಿದೆ.

ಭಾರತದಲ್ಲಿ ಗುಣಮುಖ ಪ್ರಮಾಣ 89.78% ಇದ್ದು, ಸಾವಿನ ಪ್ರಮಾಣ 1.51% ಇದೆ. ಅಕ್ಟೋಬರ್ 23ರಂದು ಒಟ್ಟು 12.69 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 10.13 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply