masthmagaa.com:

ದೇಶದಲ್ಲಿ ಕಳೆದೊಂದು ವಾರದಿಂದ ಪ್ರತಿದಿನ ದೃಢಪಡುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಕಮ್ಮಿಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 54,044 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 717 ಸೋಂಕಿತರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ದಿನವೊಂದಕ್ಕೆ 90,000ಕ್ಕೂ ಅಧಿಕ ಪ್ರಕರಣ ದೃಢಪಟ್ಟಿತ್ತು.

ಸದ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 76.51 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,15,914 ಆಗಿದೆ. ಕಳೆದ 24 ಗಂಟೆಗಳಲ್ಲಿ 61,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 67.95 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 7.40 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 88.81%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.51%ಗೆ ಕುಸಿದಿದೆ. ಅಕ್ಟೋಬರ್ 20ರಂದು 10.83 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 9.72 ಕೋಟಿ ಕೊರೋನಾ ಪರೀಕ್ಷೆಗಳನ್ನ ನಡೆಸಿದಂತಾಗಿದೆ.

ಭಾರತದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಆಗಸ್ಟ್​ 7ರಂದು 20 ಲಕ್ಷ ಗಡಿ ದಾಟಿತ್ತು. ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ರಂದು 40 ಲಕ್ಷ, ಸೆಪ್ಟೆಂಬರ್ 16ರಂದು 50 ಲಕ್ಷ, ಸೆಪ್ಟೆಂಬರ್ 28ರಂದು 60 ಲಕ್ಷ ಹಾಗೂ ಅಕ್ಟೋಬರ್ 11ರಂದು 70 ಲಕ್ಷದ ಗಡಿ ದಾಟಿತ್ತು.

-masthmagaa.com

Contact Us for Advertisement

Leave a Reply