masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60,975 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು 848 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31.67 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 58,390 ಆಗಿದೆ. 

ಕಳೆದ 24 ಗಂಟೆಗಳಲ್ಲಿ ದಾಖಲೆಯ 66,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಖುಷಿಯ ವಿಚಾರ ಅಂದ್ರೆ ಒಂದು ದಿನದಲ್ಲಿ ದೃಢಪಟ್ಟ ಪ್ರಕರಣಗಳಿಗಿಂತ ಹೆಚ್ಚು ಜನ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 24.04 ಲಕ್ಷ ದಾಟಿದ್ದು, 7.04 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 75.92% ಇದ್ದು, ಸಾವಿನ ಪ್ರಮಾಣ 1.84% ಇದೆ. ಆಗಸ್ಟ್​ 24ರಂದು ದೇಶದಲ್ಲಿ ದಾಖಲೆಯ 9.25 ಲಕ್ಷ ಸ್ಯಾಂಪಲ್​ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ 3.68 ಕೋಟಿ ಸ್ಯಾಂಪಲ್​ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ತಿಳಿಸಿದೆ.

ಸತತ 21ನೇ ದಿನ ಭಾರತದಲ್ಲಿ ಅಮೆರಿಕ ಮತ್ತು ಬ್ರೆಜಿಲ್​ಗಿಂತ ಹೆಚ್ಚು ಕೊರೋನಾ ಪ್ರಕರಣ ದೃಢಪಟ್ಟಿದೆ. ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 38,000ಕ್ಕೂ ಹೆಚ್ಚು ಮತ್ತು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ 23,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ. ಭಾರತದಲ್ಲಿ 60,000ಕ್ಕೂ ಹೆಚ್ಚು.

-masthmagaa.com

Contact Us for Advertisement

Leave a Reply