masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 62,480 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು.1,587 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 97 ಲಕ್ಷದ 62 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,83,490 ಆಗಿದೆ.

ಕಳೆದ 24 ಗಂಟೆಗಳಲ್ಲಿ 88,977 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 85 ಲಕ್ಷದ 80 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 7 ಲಕ್ಷದ 98 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.03 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.29 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.29 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 38.71ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 32.59 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 26.89 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply