ಜೂನ್​ 2ರ ಹೆಲ್ತ್​ ಬುಲೆಟಿನ್: ದೇಶದಲ್ಲಿ 2 ಲಕ್ಷ ಸಮೀಪಿಸಿದ ಸೋಂಕಿತರ ಸಂಖ್ಯೆ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಜೂನ್​​ 1ರಂದು ದಾಖಲೆಯ 8,392 ಜನರಿಗೆ ಸೋಂಕು ತಗುಲಿತ್ತು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 1,98,706 ಆಗಿದ್ದು, 2 ಲಕ್ಷ ಸಮೀಪಿಸಿದೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಇಟಲಿ ನಂತರದ ಸ್ಥಾನ ಅಂದ್ರೆ 7ನೇ ಸ್ಥಾನದಲ್ಲಿ ಭಾರತ ಇದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 204 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 5,598 ಆಗಿದೆ. ಇದುವರೆಗೆ 95,526 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 97,581 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 70 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 23 ಸಾವಿರ, ದೆಹಲಿಯಲ್ಲಿ 20 ಸಾವಿರ ಮತ್ತು ಗುಜರಾತ್​ನಲ್ಲಿ 17 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿ ಮುಂದುವರಿದಿದೆ.

-masthmagaa.com

Contact Us for Advertisement

Leave a Reply