ಜೂನ್ 3ರ ಹೆಲ್ತ್​ ಬುಲೆಟಿನ್: ದೇಶದಲ್ಲಿ 1 ಲಕ್ಷ ಜನ ಗುಣಮುಖ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 8,909 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಈ ಪ್ರಮಾಣದ ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2 ಲಕ್ಷ ದಾಟಿದ್ದು 2,07,615 ಆಗಿದೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಇಟಲಿ ನಂತರದ ಸ್ಥಾನ ಅಂದ್ರೆ 7ನೇ ಸ್ಥಾನದಲ್ಲಿ ಭಾರತ ಇದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 217 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 5,815 ಆಗಿದೆ. ಇದುವರೆಗೆ 1,00,303 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,01,497 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 72 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 24 ಸಾವಿರ, ದೆಹಲಿಯಲ್ಲಿ 22 ಸಾವಿರ ಮತ್ತು ಗುಜರಾತ್​ನಲ್ಲಿ 17 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿ ಮುಂದುವರಿದಿದೆ.

-masthmagaa.com

Contact Us for Advertisement

Leave a Reply