masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9,887 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಈ ಪ್ರಮಾಣದ ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ನಿನ್ನೆ 9,851.. ಇವತ್ತು 9,887‬.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2,36,657 ಆಗಿದೆ. ಸೋಂಕಿತರ ಸಂಖ್ಯೆಯಲ್ಲಿ ಇಟಲಿಯನ್ನ ಮೀರಿಸಿದ ಭಾರತ 6ನೇ ಸ್ಥಾನಕ್ಕೆ ಬಂದಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ 294 ಜನ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಈ ಪ್ರಮಾಣದ ಸೋಂಕಿತರು ಮೃತಪಟ್ಟಿರೋದು ಕೂಡ ಇದೇ ಮೊದಲು. ನಿನ್ನೆ 273.. ಇವತ್ತು 294.. ಈ ಮೂಲಕ ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 6,642 ಆಗಿದೆ. ಇದುವರೆಗೆ 1,14,073 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,15,942 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 80 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 28 ಸಾವಿರ, ದೆಹಲಿಯಲ್ಲಿ 26 ಸಾವಿರ ಮತ್ತು ಗುಜರಾತ್​ನಲ್ಲಿ 19 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply