masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,708 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 680 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73.07 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.11 ಲಕ್ಷ ದಾಟಿದೆ.

ಕಳೆದ 24 ಗಂಟೆಗಳಲ್ಲಿ 81,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 63.83 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 8.12 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 87.36% ಇದ್ದು, ಸಾವಿನ ಪ್ರಮಾಣ 1.52% ಇದೆ.

ಅಕ್ಟೋಬರ್ 14ರಂದು 11.36 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದೆ. ಈ ಮೂಲಕ ಇದುವರೆಗೆ ಒಟ್ಟು 9.12 ಕೋಟಿ ಕೊರೋನಾ ಪರೀಕ್ಷೆಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply