masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,311 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 161 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 4 ಲಕ್ಷದ 66 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,51,160ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ ಇಷ್ಟು ಕಡಿಮೆ ಸೋಂಕಿತರು (161) ಮೃತಪಟ್ಟಿರೋದು 7 ತಿಂಗಳ ಬಳಿಕ ಇದೇ ಮೊದಲು. ಈ ಹಿಂದೆ ಮೇ 26ರಂದು 172 ಸೋಂಕಿತರು ಮೃತಪಟ್ಟಿದ್ದರು.

ಕಳೆದ 24 ಗಂಟೆಗಳಲ್ಲಿ 19,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 92 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 22 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.42 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 10ರಂದು 6.59 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 18.17 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

masthmagaa.com

Contact Us for Advertisement

Leave a Reply