ದೇಶದಲ್ಲಿ 24 ಗಂಟೆಯಲ್ಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಸಾವು?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,064 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು,137 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 5 ಲಕ್ಷದ 81 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,52,556ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 137 ಕೊರೋನಾ ಸೋಂಕಿತರು ಮೃತಪಟ್ಟಿರೋದು ಕಳೆದ 8 ತಿಂಗಳಲ್ಲಿ ಇದೇ ಮೊದಲು.

ಕಳೆದ 24 ಗಂಟೆಗಳಲ್ಲಿ 17,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 2 ಲಕ್ಷದ 28 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.66 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 18ರಂದು 7.09 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 18.78 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply