ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಲಸಿಕೆ, ಎಷ್ಟು ಜನರಿಗೆ ಕೊರೋನಾ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,143 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 103 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 8 ಲಕ್ಷದ 92 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 11,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 6 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 36 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.32 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.43 ಪರ್ಸೆಂಟ್ ಇದೆ. ಫೆಬ್ರವರಿ 12ರಂದು 7.43 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 20.55 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ4.62 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 79.67 ಲಕ್ಷ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply