masthmagaa.com:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,203 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 131 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 67 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,53,470ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 3 ಲಕ್ಷದ 30 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 84 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ಗುಣಮುಖ ಪ್ರಮಾಣ 96.83 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 24ರಂದು 5.70 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.23 ಕೋಟಿ ಟೆಸ್ಟ್ಗಳನ್ನ ನಡೆಸಿದಂತಾಗಿದೆ.
ದೇಶದಲ್ಲಿ ನಿನ್ನೆ 33,000 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಇದುವರೆಗೆ ಒಟ್ಟು 16.15 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಿದಂತಾಗಿದೆ.
-masthmagaa.com
Contact Us for Advertisement