ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಜನರಿಗೆ ಲಸಿಕೆ..?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,052 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 127 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 7 ಲಕ್ಷದ 46 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,54,274ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 4 ಲಕ್ಷದ 23 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 68 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.99 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 30ರಂದು 7.50 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.65 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 2.44 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 37.44 ಲಕ್ಷ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply