ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಸೋಂಕು? ಎಷ್ಟು ಜನರಿಗೆ ಲಸಿಕೆ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,545 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 163 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 25 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,53,032ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 18,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 2 ಲಕ್ಷದ 83 ಸಾವಿರ ದಾಟಿದೆ. ಇನ್ನೂ ಕೂಡ 1 ಲಕ್ಷದ 88 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.78 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 20ರಂದು 8 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.01 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 2.37 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 10.43 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ.

-masthmagaa.com

Contact Us for Advertisement

Leave a Reply