ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಲಸಿಕೆ? ಎಷ್ಟು ಜನರಿಗೆ ಕೊರೋನಾ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,849 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 155 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 54 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,53,339ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 15,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 3 ಲಕ್ಷದ 16 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 84 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.83 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 23ರಂದು 7.81 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.17 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 1.91 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಇದುವರೆಗೆ ಒಟ್ಟು 15.82 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply