ದೇಶದಲ್ಲಿ 24 ಗಂಟೆಯಲ್ಲಿ ಎಷ್ಟು ಮಂದಿಗೆ ಕೊರೋನಾ..? ಎಷ್ಟು ಸಾವು..?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 181 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 5 ಲಕ್ಷದ 57 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,52,274ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 17,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 1 ಲಕ್ಷದ 96 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 8 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.58 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 16ರಂದು 7.79 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 18.65 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply