ದೇಶದಲ್ಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಜನರಿಗೆ ಲಸಿಕೆ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,223 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 151 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 10 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,52,718ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 19,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 2 ಲಕ್ಷದ 65 ಸಾವಿರ ದಾಟಿದೆ. ಇನ್ನೂ ಕೂಡ 1 ಲಕ್ಷದ 92 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ನಿನ್ನೆ 1.31 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 8.06 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಭಾರತದಲ್ಲಿ ಗುಣಮುಖ ಪ್ರಮಾಣ 96.74 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 20ರಂದು 7.80 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 18.93 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply