ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಜನರಿಗೆ ಲಸಿಕೆ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,855 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 163 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 7 ಲಕ್ಷದ 20 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,54,010ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 20,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 3 ಲಕ್ಷದ 94 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 71 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.96 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 28ರಂದು 7.42 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.50 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 5.72 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 29.28 ಲಕ್ಷ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply