ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಎಷ್ಟು ಜನರಿಗೆ ಕೊರೋನಾ, ಎಷ್ಟು ಸಾವು?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,645 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 201 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 4 ಲಕ್ಷದ 50 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,50,999ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 19,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 75 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.23 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.42 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 9ರಂದು 8.43 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 18.10 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply