masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,222 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 228 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 4 ಲಕ್ಷದ 31 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,50,798ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 19,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 56 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.24 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.40 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 8ರಂದು 9.16 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 18.02 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply