masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,821 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 299 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 2 ಲಕ್ಷದ 66 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,48,738ಕ್ಕೆ ಏರಿಕೆಯಾಗಿದೆ.

ಒಂದು ದಿನದಲ್ಲಿ 26,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 98.60 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.57 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.04 ಪರ್ಸೆಂಟ್​​ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.45 ಪರ್ಸೆಂಟ್ ಇದೆ. ಗುಣಮುಖ ಪ್ರಮಾಣದಲ್ಲಿ ಉತ್ತಮ ಸಾಧನೆ ಮಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ಡಿಸೆಂಬರ್ 30ರಂದು 11.27 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 17.20 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply