ದೇಶದಲ್ಲಿ 93.81%ಗೆ ಏರಿಕೆ ಕಂಡ ಗುಣಮುಖ ಪ್ರಮಾಣ, ಡೆತ್​ ರೇಟ್ ಇಳಿಕೆ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,772 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 443 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 94.31 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,37,139 ಆಗಿದೆ.

ಕಳೆದ 24 ಗಂಟೆಗಳಲ್ಲಿ 45,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 88.47 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.46 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 93.81%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.45%ಗೆ ಇಳಿಕೆಯಾಗಿದೆ. ನವೆಂಬರ್‌ 29ರಂದು 8.76 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 14.03 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply