masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 496 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 93.92 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,36,696 ಆಗಿದೆ.

ಕಳೆದ 24 ಗಂಟೆಗಳಲ್ಲಿ 42,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 88.02 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.53 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 93.71%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.46% ರಷ್ಟಿದೆ. ನವೆಂಬರ್‌ 28ರಂದು 12.83 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 13.95 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

 

 

Contact Us for Advertisement

Leave a Reply