ದೇಶದಲ್ಲಿ ಒಂದೇ ದಿನ 96,000 ಜನರಿಗೆ ಕೊರೋನಾ ಪಾಸಿಟಿವ್

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 96,982 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 446 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 26 ಲಕ್ಷದ 86 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,65,547 ಆಗಿದೆ.

ಕಳೆದ 24 ಗಂಟೆಗಳಲ್ಲಿ 50,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 17 ಲಕ್ಷದ 32 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 7 ಲಕ್ಷದ 88 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 92.48 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.30 ಪರ್ಸೆಂಟ್ ಇದೆ. ಏಪ್ರಿಲ್​‌ 5ರಂದು 12.11 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 25.02 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 43 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 8.31 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply