ಜೂನ್​ 7 ಹೆಲ್ತ್​ ಬುಲೆಟಿನ್: ಸ್ಪೇನ್​ ಮೀರಿಸಿದ ಭಾರತ 5ನೇ ಸ್ಥಾನಕ್ಕೆ..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9,971 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ನಿನ್ನೆ 9,887.. ಇವತ್ತು 9,971‬.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2,46,628 ಆಗಿದೆ. ಇದರೊಂದಿಗೆ ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಸ್ಪೇನ್ ಮೀರಿಸಿರುವ ಭಾರತ 5ನೇ ಸ್ಥಾನಕ್ಕೆ ಬಂದಿದೆ. ಅಮೆರಿಕ, ಬ್ರೆಜಿಲ್, ರಷ್ಯಾ ಮತ್ತು ಬ್ರಿಟನ್ ಮೊದಲ 4 ಸ್ಥಾನಗಳಲ್ಲಿವೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 287 ಜನ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 6,929 ಆಗಿದೆ. ಇದುವರೆಗೆ 1,19,293 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,20,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 82 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 30 ಸಾವಿರ, ದೆಹಲಿಯಲ್ಲಿ 27 ಸಾವಿರ ಮತ್ತು ಗುಜರಾತ್​ನಲ್ಲಿ 19 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply