masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9,983 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ನಿನ್ನೆ 9,971.. ಇವತ್ತು 9,983‬.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ ಎರಡೂವರೆ ಲಕ್ಷ ದಾಟಿದ್ದು 2,56,611 ಆಗಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 206 ಜನ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 7,135 ಆಗಿದೆ. ಇದುವರೆಗೆ 1,24,095 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,25,381 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 85 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 31 ಸಾವಿರ, ದೆಹಲಿಯಲ್ಲಿ 27 ಸಾವಿರ ಮತ್ತು ಗುಜರಾತ್​ನಲ್ಲಿ 20 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply