ಕಳೆದ ವರ್ಷ ದೇಶದಲ್ಲಿ ರಸ್ತೆ ಅಪಘಾತದಿಂದ ಸತ್ತವರ ಸಂಖ್ಯೆ 1.6 ಲಕ್ಷ!

masthmagaa.com:

2022ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳಿಂದಾಗಿ 1.68 ಲಕ್ಷ ಜನ ಮೃತಪಟ್ಟಿದ್ದಾರೆಂದು ಕೇಂದ್ರ ಸಾರಿಗೆ ಸಚಿವ ನೀತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ. ಲೋಕಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಗಡ್ಕರಿ ನೀಡಿದ ವರದಿಯಲ್ಲಿ ಈ ಮಾಹಿತಿ ಲಭ್ಯವಾಗಿದೆ ಅಂತ ತಿಳಿದು ಬಂದಿದೆ. ಈ ವರದಿ ಪ್ರಕಾರ ಉತ್ತರ ಪ್ರದೇಶ ರಾಜ್ಯದಲ್ಲೇ ಹೆಚ್ಚು ಅಂದ್ರೆ 22,595 ಜನ ಅಪಘಾತದಿಂದ ಸಾವನ್ನಪ್ಪಿದ್ದಾರೆ. 2021ರಲ್ಲಿ 1.38 ಜನ ಸಾವನ್ನಪ್ಪಿದ್ದು, ಈ ವರ್ಷ 30 ಸಾವಿರ ಜನ ಹೆಚ್ಚಾಗಿ ಅಪಘಾತಗಳಿಂದ ಮತೃ ಪಟ್ಟಿದ್ದಾರೆಂದು ಹೇಳಲಾಗಿದೆ.

-masthmagaa.com

Contact Us for Advertisement

Leave a Reply